ADVERTISEMENT

ಆಸ್ತಿ ವಿವಾದ: ಚಾಕು ಇರಿತಕ್ಕೊಳಗಾಗಿದ್ದ ಬಿಬಿಎಂಪಿ ಮಾಜಿ ಸದಸ್ಯ ಅಯೂಬ್ ಖಾನ್ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜುಲೈ 2022, 4:27 IST
Last Updated 14 ಜುಲೈ 2022, 4:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಇರಿತಕ್ಕೊಳಗಾಗಿದ್ದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಯೂಬ್‌ ಖಾನ್ ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಚಾಮರಾಜಪೇಟೆಮನೆಬಳಿ ಅಯೂಬ್‌ ಖಾನ್‌ಗೆ ಬುಧವಾರ ಸಂಜೆ ಚಾಕುವಿನಿಂದ ಇರಿಯಲಾಗಿತ್ತು.

ಕೂಡಲೇ ಅಯೂಬ್‌ ಅವರನ್ನು ಚಿಕಿತ್ಸೆಗೆ ಏಷ್ಯನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಆಸ್ತಿ ವಿಚಾರವಾಗಿ ಸಂಬಂಧಿಕರೊಬ್ಬರು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಆರೋಪಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.