ADVERTISEMENT

ಕೆಆರ್‌ಐಡಿಎಲ್‌ ನಿರ್ವಹಣೆ: ಪರಿಶಿಷ್ಟ ಗುತ್ತಿಗೆದಾರರ ವಿರೋಧ

14 ಹಣಕಾಸು ಆಯೋಗದ ಅನುದಾನದ ಕಾಮಗಾರಿ ಕೆಆರ್‌ಐಡಿಎಲ್‌ಗೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:29 IST
Last Updated 24 ಜುಲೈ 2019, 19:29 IST

ಬೆಂಗಳೂರು: ಬಿಬಿಎಂಪಿಗೆ 2018–19ನೇ ಸಾಲಿನಲ್ಲಿ 14ನೇ ಹಣಕಾಸು ಆಯೋಗದಿಂದ ಹಂಚಿಕೆ ಆಗಿರುವ ಅನುದಾನದ ಕಾಮಗಾರಿಗಳನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್‌ಐಡಿಎಲ್‌) ಮೂಲಕ ನಿರ್ವಹಿಸುವುದಕ್ಕೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರ ಸಂಘ ವಿರೋಧ ವ್ಯಕ್ತಪಡಿಸಿದೆ.

‘ರಾಜ್ಯ ಸರ್ಕಾರವು ₹50 ಲಕ್ಷವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇ 24.1ರಷ್ಟು ಮೀಸಲಾತಿ ನೀಡಬೇಕು ಎಂದು ಕಾನೂನು ರೂಪಿಸಿದೆ. ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ಗೆ ವಹಿಸಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಇವುಗಳ ಗುತ್ತಿಗೆ ಪಡೆಯಲು ಸಾಧ್ಯವಾಗುವುದಿಲ್ಲ. ಇದು ಅವರ ಹಕ್ಕನ್ನು ಕಿತ್ತುಕೊಂಡಂತೆ’ ಎಂದು ಸಂಘದ ಅಧ್ಯಕ್ಷ ಎನ್‌.ಮಹದೇವಸ್ವಾಮಿ ಅವರು ಆರೋಪಿಸಿದ್ದಾರೆ.

‘ಪಾಲಿಕೆಯ ಪತ್ರಕ್ಕೆ ನಗರಾಭಿವೃದ್ಧಿ ಇಲಾಖೆಯಿಂದ ಯಾವುದೇ ಉತ್ತರ ಬಂದಿಲ್ಲ. ಅದನ್ನು ಡೀಮ್ಡ್‌ ಅನುಮತಿ ಎಂದು ಪರಿಭಾವಿಸಿ ಕಾಮಗಾರಿ ಅನುಷ್ಠಾನದ ಹೊಣೆಯನ್ನು ಕೆಆರ್‌ಐಡಿಎಲ್‌ಗೆ ವಹಿಸುವಂತೆ ಪಾಲಿಕೆ ಸದಸ್ಯರು ಒತ್ತಾಯಿಸಿದ್ದಾರೆ’ ಎಂದು ಮೇಯರ್‌ ಅವರು ಆಯುಕ್ತರಿಗೆ ಪತ್ರ ಬರೆದಿದ್ದರು.

ADVERTISEMENT

ಆಯುಕ್ತರು ಸೋಮವಾರ ಈ ಕುರಿತಂತೆ ಕಚೇರಿ ಆದೇಶ ಹೊರಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.