ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿಯಲ್ಲಿ ನೇರ ವೇತನದಡಿ ಕರ್ತವ್ಯ ನಿರ್ವಹಿಸುತ್ತಿರುವ 12,692 ಪೌರ ಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆಯಂದು (ಮೇ 1) ನೇಮಕಾತಿ ಆದೇಶ ಪತ್ರ ನೀಡಲಾಗುತ್ತಿದೆ.
12,692 ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಸರ್ಕಾರವು ಅಂತಿಮ ಪಟ್ಟಿ ಸಿದ್ಧಪಡಿಸಿದೆ. ಕಾಯಂಗೊಂಡ ಪೌರಕಾರ್ಮಿಕರ ವೇತನವು ₹32,000 ರಿಂದ ₹33,000 ಕ್ಕೆ ಏರಿಕೆಯಾಗುತ್ತದೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.