ADVERTISEMENT

ಮೇಯರ್‌ ಚುನಾವಣೆ: ನಳಿನ್‌ ಚರ್ಚೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 20:15 IST
Last Updated 5 ಸೆಪ್ಟೆಂಬರ್ 2019, 20:15 IST
   

ಬೆಂಗಳೂರು: ಬಿಬಿಎಂಪಿ ಮೇಯರ್‌ ಚುನಾವಣೆಯನ್ನು ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ವಿವಿಧ ನಾಯಕರ ಜತೆ ಚರ್ಚೆ ನಡೆಸಿದರು.

ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಗುರುವಾರ ಮೊದಲ ಬಾರಿಗೆ ಪಕ್ಷದ ವಿವಿಧ ಘಟಕಗಳ ಸಭೆ ನಡೆಸಿ ಮಾಹಿತಿ ಪಡೆದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಸಚಿವ ಆರ್‌.ಅಶೋಕ್‌, ಶಾಸಕ ಅರವಿಂದ ಲಿಂಬಾವಳಿ ಜತೆ ವಿಶೇಷಸಭೆ ನಡೆಸಿದ ಕಟೀಲ್‌ ಅವರು ಮೇಯರ್‌ ಚುನಾವಣೆ ಮತ್ತುಡಿ.ಕೆ.ಶಿವಕುಮಾರ್‌ ಬಂಧನ ಕುರಿತೂ ಚರ್ಚಿಸಿದರು.ಮೇಯರ್‌ ಚುನಾವಣೆ ಕುರಿತು ಗುರುವಾರ ಬೆಂಗಳೂರು ನಗರ ಕಾರ್ಪೊರೇಟರ್‌ಗಳು ಮತ್ತು ಶಾಸಕರ ಜತೆಗೂ ಮಾತುಕತೆ ನಡೆಸಲಿದ್ದಾರೆ. ಕೋರ್‌ ಕಮಿಟಿ ಸಭೆಯನ್ನೂ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.ನವೆಂಬರ್‌ ಬಳಿಕ ಪಕ್ಷದ ವಿವಿಧ ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ADVERTISEMENT

ಗೆಲುವು ನಮ್ಮದೇ: ಈ ಬಾರಿ ಮೇಯರ್‌ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

ನಳಿನ್‌ ಕುಮಾರ್‌ ಕಟೀಲ್‌ ಅವರ ಜತೆ ಮಾತಕತೆ ಬಳಿಕ ಮಾಧ್ಯಮ ಪ್ರತಿನಿಧಿ ಗಳ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆಲ್ಲುವ ತಂತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾವ ರೀತಿ ಗೆಲ್ಲಬೇಕು ಎಂಬ ಕಾರ್ಯತಂತ್ರದ ಗುಟ್ಟು ಬಿಟ್ಟುಕೊಡುವುದಿಲ್ಲ. ಖಾತೆ ಹಂಚಿಕೆ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಅಧ್ಯಕ್ಷರು ಸೌಜನ್ಯದ ಭೇಟಿ ನೀಡಿದ್ದರು ಎಂದು ಅಶೋಕ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.