ADVERTISEMENT

ರಸ್ತೆ ಗುಂಡಿ ಮುಚ್ಚದಿದ್ದರೆ ದಂಡ: ಮೇಯರ್ ಗಂಗಾಂಬಿಕೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 19:32 IST
Last Updated 30 ಆಗಸ್ಟ್ 2019, 19:32 IST
   

ಬೆಂಗಳೂರು: ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.

ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸೆ.6ರಿಂದ ಅನಿರೀಕ್ಷಿತ ತಪಾಸಣೆ ಆರಂಭಿಸಲಾಗುವುದು. ಗುಂಡಿ ಮುಚ್ಚದೆ ಇರುವುದು ಅಥವಾ ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುವುದು. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದರು.

ಪಾಲಿಕೆಯ ಮುಖ್ಯ ಎಂಜಿನಿಯರ್ ಎಂ.ಆರ್.ವೆಂಕಟೇಶ್, ‘ನಿರ್ವಹಣಾ ಅವಧಿ ಬಾಕಿಯಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಗುತ್ತಿಗೆದಾರರಿಂದಲೇ ಮುಚ್ಚಿಸಲಾಗುತ್ತಿದೆ. ಅವಧಿ ಮುಗಿದ ಕಡೆ ಪಾಲಿಕೆಯಿಂದ ಮುಚ್ಚಲಾಗುತ್ತಿದೆ. ಗುಂಡಿಗಳನ್ನು ಅವೈಜ್ಞಾನಿಕವಾಗಿ ಮುಚ್ಚಿರುವುದು ಕಂಡುಬಂದರೆ ಎಂಜಿನಿಯರ್‌ಗಳಿಗೆ ₹ 1 ಸಾವಿರ ದಂಡ ವಿಧಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.