ADVERTISEMENT

ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಮೇಯರ್

​ಪ್ರಜಾವಾಣಿ ವಾರ್ತೆ
Published 22 ಮೇ 2020, 20:00 IST
Last Updated 22 ಮೇ 2020, 20:00 IST

ಬೆಂಗಳೂರು: ವಲಸೆ ಕಾರ್ಮಿಕರು ತಂಗಿರುವಪ್ಯಾಲೆಸ್ ಗ್ರೌಂಡ್ ಟೆನಿಸ್ ಪೆವಿಲಿಯನ್‌ಗೆ ಮೇಯರ್ ಎಂ.ಗೌತಮ್‌ಕುಮಾರ್ ಶುಕ್ರವಾರ ಭೇಟಿ ನೀಡಿ ಕುಂದು ಕೊರತೆ ಆಲಿಸಿದರು.

‘ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಕಾರ್ಮಿಕರನ್ನು ತಡೆದು ನಗರದ ನಾಲ್ಕು ಕಡೆ ತಂಗಲು ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದು ಮೇಯರ್ ತಿಳಿಸಿದರು.

‘ಒಡಿಶಾ, ಉತ್ತರ ಪ್ರದೇಶ, ತ್ರಿಪುರ, ಬಿಹಾರ ಸೇರಿ ಹಲವು ರಾಜ್ಯಗಳ ವಲಸೆ ಕಾರ್ಮಿಕರು ಇದ್ದಾರೆ. ಅವರನ್ನು ಊರಿಗೆ ಕಳುಹಿಸಿಕೊಡಲು ಆನ್‌ಲೈನ್ ಮೂಲಕ ರೈಲ್ವೆಟಿಕೆಟ್ ಬುಕ್ಕಿಂಗ್ ಮಾಡಲಾಗುತ್ತಿದೆ. ಕಾಯ್ದಿರಿಸಿರುವ ರೈಲು ಬಂದಾಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದೊಯ್ದು ರೈಲು ಹತ್ತಿಸಲಿದ್ದಾರೆ. ಪಾಲಿಕೆ ವತಿಯಿಂದ ಆರೋಗ್ಯ ತಪಾಸಣೆ ಕೂಡ ಮಾಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.