ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕ ಭೇಟಿಗೆ ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಜನಪ್ರತಿನಿಧಿಗಳು, ಪತ್ರಕರ್ತರಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.