ADVERTISEMENT

ಮಳೆ ಅವಾಂತರ: ಯಲಹಂಕ ಪ್ರವಾಹ ಪೀಡಿತ ಪ್ರದೇಶಕ್ಕೆ ಸಿ.ಎಂ ಬೊಮ್ಮಾಯಿ ಭೇಟಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 6:09 IST
Last Updated 23 ನವೆಂಬರ್ 2021, 6:09 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದರು.    

ಬೆಂಗಳೂರು: ಯಲಹಂಕದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಯಲಹಂಕ ವಲಯದ ಕೇಂಪೇಗೌಡ ವಾರ್ಡನಲ್ಲಿ ಜಲಾವೃತಗೊಂಡಿದ್ದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಭವಿಷ್ಯದಲ್ಲಿ ಇಂತಹ ಅನಾಹುತ ನಡೆಯದಂತೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ವೇಳೆ ಸ್ಥಳೀಯ ಶಾಸಕರು ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತ ದಯಾನಂದ್, ಜಂಟಿ ಆಯುಕ್ತರಾದ ಪೂರ್ಣಿಮಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT