ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಚಿಕ್ಕಪೇಟೆ ವಾರ್ಡ್‌ನಲ್ಲಿ ಸಮೀಕ್ಷೆ ಮಾಡಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಬಿಬಿಎಂಪಿ ಅಧಿಕಾರಿಗಳು ಹಾಗೂ ಶಿಕ್ಷಕರು ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡುತ್ತಿದ್ದಾರೆ. ಕುಟುಂಬದವರ ಮಾಹಿತಿ ಹಾಗೂ ಆರೋಗ್ಯ ಸ್ಥಿತಿ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ. ಅವರ ಮೇಲೆ ಚಿಕ್ಕಪೇಟೆಯ 18ನೇ ಅಡ್ಡರಸ್ತೆಯ ಮನೆಯೊಂದರ ನಿವಾಸಿಗಳು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಸಿಬ್ಬಂದಿ ನೀಡಿರುವ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಮನೆಯ ಸದಸ್ಯರೆಲ್ಲರೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ವಿಡಿಯೊ ಚಿತ್ರೀಕರಿಸುತ್ತಿದ್ದ ಸಿಬ್ಬಂದಿ ಮೊಬೈಲ್ ಕಿತ್ತೆಸೆದಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.