ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಕಾರ್ಯಾಚರಣೆ ನಡೆಸಿ, ಪಾದಚಾರಿ ಮಾರ್ಗಗಳ ಒತ್ತುವರಿ ಹಾಗೂ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಿದೆ.
ಅಂಗಡಿ, ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿತ್ತು. ಈ ಬಗ್ಗೆ ದೂರುಗಳು ಬಂದಿದ್ದವು.
ಪೂರ್ವ ವಲಯದ ಸಿ. ವಿ. ರಾಮನ್ ನಗರ ವ್ಯಾಪ್ತಿಯ ವಾರ್ಡ್ ಸಂಖ್ಯೆ 109, ಹಳೇ ವಾರ್ಡ್ ಸಂಖ್ಯೆ 50 ರ ಕಸ್ತೂರಿನಗರದ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ರಸ್ತೆಗಳ ಮೇಲಿದ್ದ ತಳ್ಳುವ ಗಾಡಿಗಳನ್ನು ತೆರವುಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಯಿತು.
ಇದೇ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ಸಹ ತೆರವುಗೊಳಿಸಲಾಯಿತು. ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಎಂಜಿನಿಯರ್‌ಗಳು , ಆರೋಗ್ಯ ಪರಿವೀಕ್ಷಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.