ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡಗಳ ತ್ಯಾಜ್ಯ ಅಥವಾ ಭಗ್ನಾವಶೇಷ ಹಾಕುವುದು, ವಾಹನ ನಿಲ್ಲಿಸುವುದು ಅಥವಾ ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರಿಗೆ ₹10 ಸಾವಿರ ದಂಡ ವಿಧಿಸುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಎಚ್ಚರಿಸಿದೆ.
ನಗರದ ವಿಲ್ಸನ್ ಗಾರ್ಡನ್ ಬಳಿಯ ಪಾದಚಾರಿ ಮಾರ್ಗದಲ್ಲಿ ಕಟ್ಟಡದ ತ್ಯಾಜ್ಯ ಸುರಿದವರಿಗೆ ₹10 ಸಾವಿರ ದಂಡ ವಿಧಿಸಲಾಗಿದೆ ಎಂದೂ ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.