ಬಿಬಿಎಂಪಿ
ಬೆಂಗಳೂರು: ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಬಿಬಿಎಂಪಿ ನೀಡಿದ್ದ ನೋಟಿಸ್‌ಗೆ ಒಟ್ಟು 4,068 ಆಸ್ತಿ ಮಾಲೀಕರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಆಸ್ತಿ ತೆರಿಗೆಯನ್ನು ಕಡಿಮೆ ಘೋಷಿಸಿದ್ದಾಗಿ ನೋಟಿಸ್ ನೀಡಲಾಗಿತ್ತು. ಪಾಲಿಕೆ ನೀಡಿದ ಒಟ್ಟು ನೋಟಿಸ್‌ಗಳಲ್ಲಿ ಶೇಕಡ 13ರಷ್ಟು ಮಂದಿ ಆಕ್ಷೇಪಣೆ ಸಲ್ಲಿಸಿದ್ದಾರೆ.
ಬೊಮ್ಮನಹಳ್ಳಿ, ಮಹದೇವಪುರ ಮತ್ತು ಪೂರ್ವ ವಲಯಗಳಿಂದ ತಲಾ 700ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ದಕ್ಷಿಣ, ಯಲಹಂಕ ಮತ್ತು ರಾಜರಾಜೇಶ್ವರಿ ನಗರ ವಲಯಗಳಲ್ಲಿ ತಲಾ 400 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಈ ಎಲ್ಲ ಅರ್ಜಿಗಳನ್ನು ಬಿಬಿಎಂಪಿಯ ಹೊಸದಾಗಿ ಅಭಿವೃದ್ಧಿಪಡಿಸಿದ ‘ಇ-ನ್ಯಾಯ’ ವೆಬ್ ಪೋರ್ಟಲ್ ಮೂಲಕ ಸಲ್ಲಿಸಲಾಗಿದೆ. ಇದರ ಮೂಲಕ ಪ್ರಕರಣಗಳನ್ನು ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಜುಲೈ ಅಂತ್ಯದಿಂದ ಆಗಸ್ಟ್ ಆರಂಭದವರೆಗೆ, ಸುಮಾರು 31 ಸಾವಿರ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಇದರಲ್ಲಿ ಬಹುತೇಕರು ಫ್ಲ್ಯಾಟ್ ಮಾಲೀಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.