ADVERTISEMENT

ಮಳೆ: ಸನ್ನದ್ಧರಾಗಲು ಸೂಚನೆ– ತುಷಾರ್‌ ಗಿರಿನಾಥ್‌

ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 15:42 IST
Last Updated 1 ಸೆಪ್ಟೆಂಬರ್ 2023, 15:42 IST
ಬಿಬಿಎಂಪಿ
ಬಿಬಿಎಂಪಿ    

ಬೆಂಗಳೂರು: ಮಳೆ ಸಂದರ್ಭದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಸನ್ನದ್ಧರಾಗಿರಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಹಾಗೂ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ಇತ್ತು, ಎಲ್ಲ ವಲಯ  ಆಯುಕ್ತರು, ಜಂಟಿ ಆಯುಕ್ತರು ಮತ್ತು ಮುಖ್ಯ ಎಂಜಿನಿಯರ್‌ಗಳು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಬೇಕು ಎಂದು ಹೇಳಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು, ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯ ಎಂಜಿನಿಯರ್‌ಗಳು ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು ಎಂದರು.

ADVERTISEMENT

ಪಾಲಿಕೆಯ ವಿಪತ್ತು ನಿರ್ವಹಣಾ ತಂಡ ದಿನದ 24 ಗಂಟೆಯೂ ಸನ್ನದರಾಗಿದ್ದು ಸಮರೋಪಾದಿಯಲ್ಲಿ ಅತಿವೃಷ್ಟಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಸೂಚಿಸಿದರು.

ಪಾಲಿಕೆ ಎಲ್ಲಾ ವಲಯದ ಮುಖ್ಯ ಎಂಜಿನಿಯರ್‌ಗಳು ತಕ್ಷಣವೇ ಬೃಹತ್ ನೀರುಗಾಲುವೆ ವಿಭಾಗದ ಅಧಿಕಾರಿಗಳ ಜೊತೆ ಸಮನ್ವಯ ನಡೆಸ‌ಬೇಕು. ಪ್ರಮುಖ ನೀರು ನಿಲ್ಲುವ ಸ್ಥಳಗಳನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ತುಷಾರ್ ಗಿರಿನಾಥ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.