ADVERTISEMENT

ಒತ್ತುವರಿ ತೆರವು | ದರ್ಶನ್, ಶಾಮನೂರು ಅವರಿಗೆ ಅನ್ವಯಿಸದೇ: ಶಾಸಕ ಆರ್‌.ಮಂಜುನಾಥ್‌

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 3:54 IST
Last Updated 1 ಆಗಸ್ಟ್ 2021, 3:54 IST
ಸಭೆಯಲ್ಲಿ ಆರ್.ಮಂಜುನಾಥ್, ಎಚ್.ಡಿ.ಕುಮಾರಸ್ವಾಮಿ, ಡಿ.ಆರ್. ನಂಜುಂಡಪ್ಪ ಇದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಸಂತ್ರಸ್ತರು   -ಪ್ರಜಾವಾಣಿ ಚಿತ್ರ
ಸಭೆಯಲ್ಲಿ ಆರ್.ಮಂಜುನಾಥ್, ಎಚ್.ಡಿ.ಕುಮಾರಸ್ವಾಮಿ, ಡಿ.ಆರ್. ನಂಜುಂಡಪ್ಪ ಇದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಸಂತ್ರಸ್ತರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಸುಪ್ರೀಂ ಕೋರ್ಟ್‌ ತೀರ್ಪನ್ನು ಮುಂದಿಟ್ಟುಕೊಂಡು ಬಡವರ ಮನೆಗಳನ್ನು ಕೆಡವಲಾಗುತ್ತಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದವರ ಮನೆಗಳನ್ನು ತೆರವುಗೊಳಿಸುವಂತೆ ರಾಷ್ಟ್ರೀಯ ಹಸಿರು ಮಂಡಳಿ ತೀರ್ಪು ನೀಡಿದಾಗಲೂ ಬಡವರ ಮನೆಗಳನ್ನು ಮಾತ್ರ ಧ್ವಂಸಗೊಳಿಸಲಾಯಿತು. ನಟ ದರ್ಶನ್, ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಮಾತ್ರ ಈ ತೀರ್ಪನ್ನು ಅನ್ವಯಿಸಲಿಲ್ಲ’ ಎಂದು ಶಾಸಕ ಆರ್. ಮಂಜುನಾಥ್‌ ದೂರಿದರು.

‘ಈ ಜನರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿದ್ದರೆ ಕ್ರಮ ತೆಗೆದುಕೊಳ್ಳಬಹುದಿತ್ತು. ಆದರೆ, ತಾವು ಉಳುಮೆಗಾಗಿ ಇಟ್ಟುಕೊಂಡಿದ್ದ ಜಾಗದಲ್ಲಿ ಮನೆ ಕಟ್ಟಿದ್ದಾರೆ’ ಎಂದರು.

‘ಭೂಮಿ ಕಳೆದುಕೊಳ್ಳುತ್ತಿರುವ ಸಂತ್ರಸ್ತರು ಅರ್ಜಿ ಸಲ್ಲಿಸಲು 2022 ಫೆ.15ರವರೆಗೆ ಅವಕಾಶವಿದೆ. ಆದರೆ ಬಿಡಿಎ ಅಧಿಕಾರಿಗಳು ನ್ಯಾಯಾಲಯದ ಆದೇಶದ ನೆಪದಲ್ಲಿ ಮನೆಗಳನ್ನು ಉರುಳಿಸಿ ದೌರ್ಜನ್ಯ ಎಸಗುತ್ತಿದ್ದಾರೆ’ ಎಂದು ಟೀಕಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.