ADVERTISEMENT

ಪಾದಚಾರಿ ಮಾರ್ಗ: ಸಾಮಗ್ರಿ ತೆರವುಗೊಳಿಸಲು ಆ.21ರವರೆಗೆ ಗಡುವು: ತುಷಾರ್‌ ಗಿರಿನಾಥ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 4:22 IST
Last Updated 19 ಆಗಸ್ಟ್ 2022, 4:22 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿರುವ ಪೈಪ್ ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಆ.21ರ ಭಾನುವಾರದವರೆಗೆ ಗಡುವು ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶಿಸಿದ್ದಾರೆ.

ಕಟ್ಟಡ ನಿರ್ಮಾಣದ ವಸ್ತು ಮತ್ತು ಪೈಪ್‌ಗಳಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಆದ್ದರಿಂದ ಆಯಾ ವಲಯದ ಎಲ್ಲಾ ಮುಖ್ಯ ಎಂಜಿನಿಯರ್‌ಗಳು ತೆರವುಗೊಳಿಸುವ ಕಾರ್ಯವನ್ನು ಕೂಡಲೇ ಆರಂಭಿಸಬೇಕು ಎಂದು ಸೂಚಿಸಿದ್ದಾರೆ.

ತೆರವುಗೊಳಿಸಿರುವ ಬಗ್ಗೆ ಜಿಯೋ ಟ್ಯಾಗ್ ಫೋಟೊಸಹಿತ ವರದಿಯನ್ನು ಎಲ್ಲಾ ವಿಭಾಗಗಳ ಕಾರ್ಯಪಾಲಕ ಎಂಜಿನಿಯರ್‌ಗಳು ಆ.21ರ ಸಂಜೆ 4ರೊಳಗೆ ಪ್ರಧಾನ ಎಂಜಿನಿಯರ್‌ಗೆ ವರದಿ ನೀಡಬೇಕು. ತೆರವುಗೊಳಿಸುವಲ್ಲಿ ವಿಫಲವಾದರೆ ಅಥವಾ ವರದಿ ನೀಡದಿದ್ದರೆ ಸಂಬಂಧಪಟ್ಟ ಮುಖ್ಯ ಎಂಜಿನಿಯರ್‌ ಮತ್ತು ಕಾರ್ಯಪಾಲಕ ಎಂಜಿನಿಯರ್‌ಗಳ ಮೇಲೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.