ADVERTISEMENT

ಬಿಬಿಎಂಪಿಯ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 19:52 IST
Last Updated 9 ಜುಲೈ 2025, 19:52 IST
<div class="paragraphs"><p>ಬಿಬಿಎಂಪಿ&nbsp;</p></div>

ಬಿಬಿಎಂಪಿ 

   

ಬೆಂಗಳೂರು: ಬಿಬಿಎಂಪಿಯ ಶಾಲಾ-ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ದಾಖಲಾತಿ ಪ್ರಕ್ರಿಯೆಗೆ ಜೂನ್‌ 30ರವರೆಗೆ ಅವಕಾಶವಿತ್ತು. ಸಾರ್ವಜನಿಕರ ಮನವಿ ಮೇರೆಗೆ, ಶಿಶುವಿಹಾರದಿಂದ 10ನೇ ತರಗತಿಯವರೆಗೆ ದಾಖಲಾತಿ ಪ್ರಕ್ರಿಯೆಯನ್ನು ವಿಸ್ತರಿಸ ಲಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತೀರ್ಣರಾದ

ADVERTISEMENT

ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯುತ್ತಿರುವುದರಿಂದ ಅದರ ಫಲಿತಾಂಶ ಬಂದ ನಂತರ ಪ್ರಥಮ ಪಿಯುಸಿಗೆ ದಾಖಲಾತಿ ಪಡೆಯಬಹುದಾಗಿರುತ್ತದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ಹಿರಿಯ ಸಹಾಯಕ ನಿರ್ದೇಶಕ ಮುನಿಶಾಮಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.