ADVERTISEMENT

ವಿನಾಯಕನಗರದಲ್ಲಿ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 22 ಮೇ 2020, 20:00 IST
Last Updated 22 ಮೇ 2020, 20:00 IST
ವಿನಾಯಕನಗರದಲ್ಲಿ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಶುಕ್ರವಾರ ಪರಿಶೀಲನೆ ನಡೆಸಿದರು
ವಿನಾಯಕನಗರದಲ್ಲಿ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ಶುಕ್ರವಾರ ಪರಿಶೀಲನೆ ನಡೆಸಿದರು   

ಬೆಂಗಳೂರು: ಬಿಬಿಎಂಪಿ 136ನೇ ವಾರ್ಡ್‌ನ ವಿನಾಯಕನಗರದ ವ್ಯಕ್ತಿಯೊಬ್ಬರಲ್ಲಿ ಕೋವಿಡ್–19 ದೃಢಪಟ್ಟಿರುವ ಕಾರಣ ಈ ಬಡಾವಣೆಯ 2ನೇ ಕ್ರಾಸ್‌ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಸೋಂಕಿತ ವ್ಯಕ್ತಿಯ ಜತೆ 8 ಜನರನ್ನು ಪ್ರಾಥಮಿಕ ಸಂಪರ್ಕ,6 ಮಂದಿಯನ್ನು ದ್ವಿತೀಯ ಸಂಪರ್ಕಿತರು ಎಂದು ಗುರುತಿಸಲಾಗಿದೆ.

ಈ ಮನೆಯ ಮಾಲೀಕರಕುಟುಂಬವನ್ನು ದ್ವಿತೀಯ ಸಂಪರ್ಕಿತರು ಎಂದು ಪರಿಗಣಿಸಿ ಕ್ವಾರಂಟೈನ್ ಮಾಡಲಾಗಿದೆ. ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್, ಸೀಲ್‌ಡೌನ್ ಪ್ರದೇಶದಲ್ಲಿ ಸಂಚಾರ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

‘ಪಾದರಾಯನಪುರದಲ್ಲಿ ಈವರೆಗೆ 430 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು,ಅವರಲ್ಲಿ 190 ಮಂದಿಯ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿ ಬರಬೇಕಿದೆ’ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.