ಬೆಂಗಳೂರು: ‘ನಗರದ ಅಭಿವೃದ್ಧಿಗಾಗಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್ ಬೆಂಗಳೂರು’ ರಚಿಸಿದ್ದೇವೆ. ಇದಕ್ಕೆ ಇನ್ನಷ್ಟು ಪ್ರದೇಶವನ್ನು ಸೇರಿಸಿ, ಒಂದು ತಿಂಗಳಲ್ಲಿ ಎಷ್ಟು ಪಾಲಿಕೆಗಳನ್ನು ಮಾಡಬೇಕು ಎಂದು ನಿರ್ಧರಿಸಲಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಬಿಎಂಪಿಯ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ 53 ಸಾಧಕರಿಗೆ ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.
‘ಕೆಂಪೇಗೌಡ ಅವರು ಹಾಕಿಕೊಟ್ಟ ಅಡಿಪಾಯದ ಮೇಲೆ ನಾವು ‘ಬ್ರ್ಯಾಂಡ್ ಬೆಂಗಳೂರು’ ಮಾಡುವ ಪರಿಕಲ್ಪನೆ ಇದೆ. ನಾವೆಲ್ಲರೂ ಸೇರಿ, ಬಲಿಷ್ಠ ಬೆಂಗಳೂರು, ಶಾಂತಿ ಬೆಂಗಳೂರು, ಗ್ರೀನ್ ಬೆಂಗಳೂರು, ಸುರಕ್ಷಿತ ಬೆಂಗಳೂರು ನಿರ್ಮಿಸೋಣ’ ಎಂದರು.
‘ಸ್ಕೈ ಡೆಕ್ ನಿರ್ಮಾಣದ ವಿಷಯದಲ್ಲಿ ತಾಂತ್ರಿಕ ಅಂಶಗಳಿವೆ. ಇದಕ್ಕೆ ವಿಮಾನ ನಿಲ್ದಾಣ ಅಧಿಕಾರಿಗಳು ಒಪ್ಪಿಗೆ ನೀಡಬೇಕು. ವಿಮಾನ ನಿಲ್ದಾಣದಿಂದ 20 ಕಿ.ಮೀ ದೂರದಲ್ಲಿ ನಿರ್ಮಿಸಬೇಕಾಗುತ್ತದೆ. ನಮ್ಮ ಮೆಟ್ರೊಗೆ ಹತ್ತಿರದ ಜಾಗ ಹುಡುಕುತ್ತಿದ್ದು, ಶೀಘ್ರ ಅಂತಿಮಗೊಳಿಸುತ್ತೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.