ಬೆಂಗಳೂರು: ‘ನಗರದಲ್ಲಿ ಬೀದಿ ನಾಯಿಗಳಿಗಾಗಿ ಎರಡು ನಿಗಾ ಕೇಂದ್ರಗಳಿವೆ. ಇನ್ನಷ್ಟು ಕೇಂದ್ರಗಳನ್ನು ನಿರ್ಮಿಸಿ, ಬೀದಿ ನಾಯಿಗಳಿಗೆ ಉತ್ತಮ ಪರಿಸರ ನಿರ್ಮಿಸಬೇಕಾಗಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.
‘ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ನೀಡಿರುವ ಆದೇಶವನ್ನು ಪರಿಶೀಲಿಸಿ, ಸರ್ಕಾರೊಂದಿಗೆ ಚರ್ಚಿಸಿ ಇಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ’ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
‘ಬೀದಿ ನಾಯಿಗಳಿಗೆ ಆಹಾರ ನೀಡಲು ಟೆಂಡರ್ ಕರೆಯಲಾಗಿದೆ. ಅದರೆ ಇನ್ನೂ ಅಂತಿಮಗೊಂಡಿಲ್ಲ. ನಾವು ‘ಬಿರಿಯಾನಿ’ ನೀಡುತ್ತಿಲ್ಲ. ಪೌಷ್ಟಿಕ ಆಹಾರ ನೀಡಲು ಯೋಚಿಸಲಾಗಿದೆ. ಬೀದಿ ನಾಯಿಗಳು ತಮ್ಮ ಪ್ರದೇಶ ಹಾಗೂ ಆಹಾರಕ್ಕಾಗಿ ಮಾತ್ರ ವ್ಯಗ್ರಗೊಳ್ಳುತ್ತವೆ’ ಎಂದರು.
‘ಬೀದಿ ನಾಯಿಗಳ ಬಗ್ಗೆ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ನಿಗದಿಪಡಿಸಿದೆ. ಅದನ್ನು ಮರುಪರಿಶೀಲಿಸುವ ಅಗತ್ಯವಿದೆಯೇ ಎಂಬ ಬಗ್ಗೆ ಯೋಚಿಸಲಾಗುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಆ.16ರ ಶನಿವಾರದಂದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.