ADVERTISEMENT

ವಾರಾಂತ್ಯಕ್ಕೆ ರಸ್ತೆ ಗುಂಡಿ ಮುಚ್ಚುವ ಗುರಿ: ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2022, 20:45 IST
Last Updated 23 ಅಕ್ಟೋಬರ್ 2022, 20:45 IST
ರಾಜಾಜಿನಗರ ಪ್ರವೇಶ ದ್ವಾರದ ಸಮೀಪ ಸುಜಾತಾ ಟಾಕೀಸ್‌ ರಸ್ತೆಯಲ್ಲಿ ಬಿಬಿಎಂಪಿ ದುರಸ್ತಿ ಕಾರ್ಯ ನಡೆಸಿತು.
ರಾಜಾಜಿನಗರ ಪ್ರವೇಶ ದ್ವಾರದ ಸಮೀಪ ಸುಜಾತಾ ಟಾಕೀಸ್‌ ರಸ್ತೆಯಲ್ಲಿ ಬಿಬಿಎಂಪಿ ದುರಸ್ತಿ ಕಾರ್ಯ ನಡೆಸಿತು.   

ಬೆಂಗಳೂರು: ಬಿಬಿಎಂಪಿಯ ಎಂಟು ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ, ದುರಸ್ತಿ ಮಾಡುವ ಕಾರ್ಯ ಆರಂಭವಾಗಿದೆ. ಮಳೆ ಒಂದುವಾರ ಬಿಡುವು ನೀಡುವ ಮುನ್ಸೂಚನೆ ಇದ್ದು, ಅಷ್ಟರೊಳಗೆ ಎಲ್ಲ ಗುಂಡಿ ಮುಚ್ಚುವ ಗುರಿಯನ್ನು ಬಿಬಿಎಂಪಿ ಹೊಂದಿದೆ.

‘ನಗರದ ಎಲ್ಲ ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಶನಿವಾರದಿಂದ ಆರಂಭಿಸಲಾಗಿದೆ. ಎಲ್ಲೆಡೆಯೂ ಸಮರೋಪಾದಿಯಲ್ಲಿಕೆಲಸ ನಡೆಯುತ್ತಿದೆ. ಹಬ್ಬದ ಸಂದರ್ಭದಲ್ಲೂ ಕಾರ್ಯನಿರ್ವಹಿಸಲಾಗುತ್ತದೆ’ ಎಂದು ಬಿಬಿಎಂಪಿ ಪ್ರಧಾನ ಎಂಜಿನಿಯರ್‌ ಪ್ರಹ್ಲಾದ್‌ ತಿಳಿಸಿದರು.

‘ಅತಿ ಹೆಚ್ಚು ಮಳೆಯಿಂದಾಗಿಹಲವು ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ಈ ಹಿಂದೆ ನಾವು ಲೆಕ್ಕಮಾಡಿದ ಗುಂಡಿಗಳಿಗಿಂತ ಸಂಖ್ಯೆ ಹೆಚ್ಚಾಗಿದೆ. ಶನಿವಾರದಿಂದ ಈ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿ ಯೋಜನೆ ಹಾಗೂ ರಸ್ತೆ ಮೂಲಸೌಕರ್ಯ ವಿಭಾಗದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ವಾರ್ಡ್‌ವಾರು ರಸ್ತೆಗಳಲ್ಲಿ ವಲಯ ಮಟ್ಟದ ಎಂಜಿನಿಯರಿಂಗ್‌ ವಿಭಾಗದಿಂದ ಗುಂಡಿಗಳನ್ನುಮುಚ್ಚಲಾಗುತ್ತಿದೆ’ ಎಂದು ಅವರು ಹೇಳಿದರು.

ADVERTISEMENT

‘ಯಲಹಂಕದಲ್ಲಿ ಬಿಬಿಎಂಪಿ ತನ್ನ ಸ್ವಂತ ಡಾಂಬರು ಘಟಕವನ್ನು ಹೊಂದಿದೆ. ಇದಲ್ಲದೆ, ಯಲಹಂಕ, ದಕ್ಷಿಣ, ಪಶ್ಚಿಮ, ಪೂರ್ವ ವಲಯದಲ್ಲಿ ಖಾಸಗಿಯವರಿಂದ ತಲಾ ಒಂದು ಘಟಕವನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಳ್ಳಲಾಗಿದೆ. ಈ ಐದು ಘಟಕಗಳಿಂದ ಮಿಶ್ರಣವನ್ನು ರವಾನಿಸಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ಸಾಧ್ಯವಾದಷ್ಟು ಬೇಗ ಗುಂಡಿಗಳನ್ನು ಮುಚ್ಚಲಾಗುತ್ತದೆ. ಹಬ್ಬದ ಸಂದರ್ಭದಲ್ಲಿ ರಜೆ ಇದ್ದರೂ ಸಿಬ್ಬಂದಿಗೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.