ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ (2025-26) ಪಾಲಿಕೆಯ ಆಸ್ತಿ ತೆರಿಗೆ ಸಂಗ್ರಹವು ₹6,000 ಕೋಟಿಯನ್ನು ಮೀರಲಿದೆ. ಆಸ್ತಿ ತೆರಿಗೆಯನ್ನು ಹೆಚ್ಚಿಸದಿರುವ ಕಾರಣ ಇದು ಸಾಧ್ಯವಾಗಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.
2023-24ನೇ ಸಾಲಿಗಿಂತ 2024-25ನೇ ಸಾಲಿನಲ್ಲಿ ₹1,000 ಕೋಟಿಗಳಿಗಿಂತ ಹೆಚ್ಚಿನ ಮೊತ್ತದ ಆಸ್ತಿ ತೆರಿಗೆ ಸಂಗ್ರಹಣೆಯಾಗಿದೆ. 2023-24 ನೇ ಸಾಲಿನಲ್ಲಿ ₹3,918 ಕೋಟಿ ಆಸ್ತಿ ತೆರಿಗೆ ಸಂಗ್ರಹಣೆಯಾಗಿತ್ತು.
‘ಒಂದು ಬಾರಿ ಪರಿಹಾರ ಯೋಜನೆ, ಬಾಕಿ ಮತ್ತು ಪ್ರಸ್ತುತ ತೆರಿಗೆ ಬಾಕಿಗಳ ಮೇಲೆ ವ್ಯವಸ್ಥಿತ ಕೆಲಸ ನಿರ್ವಹಣೆ ಮತ್ತು ತಂತ್ರಜ್ಞಾನ ಆಧಾರಿತ ಅನುಸರಣೆ, ಬಾಕಿ ಆಸ್ತಿ ತೆರಿಗೆಗಳ ವಸೂಲಾತಿಗೆ ಪರಿಣಾಮಕಾರಿ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳು ಮತ್ತು ನಿಯಮಗಳನ್ನು ಜಾರಿಗೊಳಿಸಲಾಗಿತ್ತು.
ಬಾಕಿ ಹಾಗೂ ಆಸ್ತಿ ತೆರಿಗೆ ವಸೂಲಾತಿಗೆ ಮನೆ- ಮನೆಗಳಿಗೆ ನಿರಂತರವಾಗಿ ಭೇಟಿ. ಈ ಎಲ್ಲಾ ಅಂಶಗಳಿಂದ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ’ ಎಂದು ಮೌದ್ಗಿಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.