ADVERTISEMENT

ಗುಣಮಟ್ಟ ಪರಿಶೀಲಿಸಿದ ಬಳಿಕ ಬಿಲ್‌ ಪಾವತಿಸಿ: ಪಿ.ಆರ್‌. ರಮೇಶ್‌

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 21:12 IST
Last Updated 30 ಆಗಸ್ಟ್ 2022, 21:12 IST
ಪಿ.ಆರ್‌. ರಮೇಶ್‌
ಪಿ.ಆರ್‌. ರಮೇಶ್‌   

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿದ ನಂತರವೇ ಬಿಲ್‌
ಗಳನ್ನು ಗುತ್ತಿಗೆದಾರರಿಗೆ ಪಾವತಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಪಿ.ಆರ್‌. ರಮೇಶ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಪತ್ರ ಬರೆದಿರುವ ಅವರು, ‘ಸುಮಾರು ₹3,000 ಕೋಟಿಗಿಂತಲೂ ಅಧಿಕ ಮೊತ್ತದ ಸಿವಿಲ್‌ ಹಾಗೂ ರಸ್ತೆ ಕಾಮಗಾರಿಗಳ ಹಣವನ್ನು ಗುತ್ತಿಗೆದಾರರಿಗೆ ಪಾವತಿಸುವುದು ಬಾಕಿ ಇದೆ. ಈ ಮೊತ್ತವನ್ನು ಪಾವತಿಸುವ ಮುನ್ನ ಎಲ್ಲ ಎಂಟು ವಲಯಗಳಿಗೂ ಖುದ್ದಾಗಿ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಸಿವಿಲ್‌ ಹಾಗೂ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟ ಕಾಪಾಡಿಲ್ಲ ಹಾಗೂ ಅನಗತ್ಯ ಕಾಮಗಾರಿಗಳನ್ನು ಕೈಗೊಂಡು ಹಣವನ್ನು ಪೋಲು ಮಾಡಲಾಗಿದೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಸಾಮಾನ್ಯ ದೂರು. ಹಲವು ರಸ್ತೆಗಳ ಕಾಮಗಾರಿಗಳು ಕೇವಲ 5–6 ತಿಂಗಳು ಅಥವಾ ಒಂದು ವರ್ಷದ ಒಳಗೆ ಸಂಪೂರ್ಣ ಹಾಳಾಗಿರುವ ಉದಾಹರಣೆಗಳನ್ನು ಸಹ ನಾವು ನೋಡಿದ್ದೇವೆ. ಇಂತಹ ಕಳಪೆ ಕಾಮಗಾರಿಗಳನ್ನುಕೈಗೊಂಡಿರುವ ಗುತ್ತಿಗೆದಾರರು ಹಾಗೂ ಸಹಕರಿಸಿದ ಪಾಲಿಕೆಯ ಅಧಿಕಾರಿಗಳ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಮಾಹಿತಿಯನ್ನು ಸಹ ಒದಗಿಸಬೇಕು’ ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.