ADVERTISEMENT

ಬಿಬಿಎಂಪಿ: 867 ಹುದ್ದೆ ಶೀಘ್ರ ಭರ್ತಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 19:58 IST
Last Updated 3 ಜನವರಿ 2019, 19:58 IST

ಬೆಂಗಳೂರು: ಬಿಬಿಎಂಪಿಯು ಖಾಲಿಯಿರುವ ಹುದ್ದೆಗಳ ಪೈಕಿ867 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ.

ಪಾಲಿಕೆಯಲ್ಲಿ 17,391 ಹುದ್ದೆಗಳು ಇವೆ. ಈ ಪೈಕಿ 10 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇರುವ ಅಧಿಕಾರಿ/ ಸಿಬ್ಬಂದಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗುತ್ತಿತ್ತು. ಇದರಿಂದ ನೌಕರರ ಮೇಲೆ ಒತ್ತಡವೂ ಹೆಚ್ಚುತ್ತಿತ್ತು. ಪಾಲಿಕೆಯ ಕಾರ್ಯಚಟುವಟಿಕೆ ಮೇಲೆ ಪರಿಣಾಮವಾಗುತ್ತಿತ್ತು.

ಈಗ 17 ವಿಭಾಗಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಗಾಗಿ ಕೆಪಿಎಸ್‌ಸಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಪಾಲಿಕೆ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.