ADVERTISEMENT

ಆಕ್ಷೇಪಣೆ ಪರಿಶೀಲನೆಗೆ ಸಮಯಾವಕಾಶ ಬೇಕು: ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 17:26 IST
Last Updated 23 ಸೆಪ್ಟೆಂಬರ್ 2020, 17:26 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು: ‘ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಸಂಬಂಧ 900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಅವುಗಳ ಪರಿಶೀಲನೆಗೆ ಸಮಯಾವಕಾಶ ಬೇಕು’ ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ ನೀಡಿದೆ.

‘ಸೆ.14ರಂದು ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ’ ಎಂದುಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ತಿಳಿಸಿದರು.

‘198 ವಾರ್ಡ್‌ಗಳ ಮತದಾರರ ಪಟ್ಟಿ ಸಿದ್ಧಪಡಿಸುವ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರ ಪ್ರಕಾರ ನವೆಂಬರ್ 20ರ ವೇಳೆಗೆ ಮತದಾರರ ಪಟ್ಟಿ ಅಂತಿಮಗೊಳ್ಳಬೇಕು’ ಎಂದುರಾಜ್ಯ ಚುನಾವಣಾ ಆಯೋಗ ಹೇಳಿತು.

ADVERTISEMENT

ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅಕ್ಟೋಬರ್ 5ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.