ADVERTISEMENT

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2023, 23:52 IST
Last Updated 25 ಸೆಪ್ಟೆಂಬರ್ 2023, 23:52 IST
<div class="paragraphs"><p>&nbsp;ಬಿಬಿಎಂಪಿ</p></div>

 ಬಿಬಿಎಂಪಿ

   

ಬೆಂಗಳೂರು: ಬಿಬಿಎಂಪಿ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರವು ಒಪ್ಪಿರುತ್ತದೆ ಹಾಗೂ ಬಿಬಿಎಂಪಿ ಅಧಿನಿಯಮ– 2020ರ ಕಲಂ 7ರ ಅನ್ವಯ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ವಾರ್ಡ್‌ ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ADVERTISEMENT

ವಾರ್ಡ್‌ಗಳ ಸಂಖ್ಯೆ 225 ಆಗಿದ್ದು, ವಾರ್ಡ್‌ಗಳ ಹೆಸರು ಮತ್ತು ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.

ಪ್ರದೇಶ ಪುನರಾವರ್ತನೆ: ಅಂತಿಮ ಅಧಿಸೂಚನೆಯಲ್ಲಿ ಕೆಲವು ಪ್ರದೇಶಗಳು ಪುನರಾವರ್ತನೆಯಾಗಿವೆ. 188ನೇ ವಾರ್ಡ್‌ನಲ್ಲಿ (ಯಡಿಯೂರು) ಇರುವ ಪ್ರದೇಶಗಳೇ 189ನೇ ವಾರ್ಡ್‌ನಲ್ಲಿವೆ. ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಬಿಜೆಪಿಯ ಮಾಜಿ ಪಾಲಿಕೆ ಸದಸ್ಯರಿಗೆ ಅನುಕೂಲ ಮಾಡಿಕೊಡಲು ಪದ್ಮನಾಭನಗರ, ಕೆ.ಆರ್‌.ಪುರ, ಜಯನಗರ, ಯಶವಂತಪುರ ಸಹಿತ ಹಲವು ವಾರ್ಡ್‌ಗಳಲ್ಲಿ ಬೂತ್‌ಗಳನ್ನು ಬದಲಾಯಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ರಮೇಶ್ ಎನ್. ಆರ್. ರಮೇಶ್‌ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.