ADVERTISEMENT

ಗುತ್ತಿಗೆ ಸಮಸ್ಯೆ: ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜೂನ್ 2019, 19:34 IST
Last Updated 11 ಜೂನ್ 2019, 19:34 IST

ಬೆಂಗಳೂರು: ರಾಜ್ಯದಲ್ಲಿರುವ ಕೆಲವು ಕೈಗಾರಿಕಾ ಸಮೂಹಗಳು ಮೂರು ವರ್ಷಗಳಿಂದ ಎದುರಿಸುತ್ತಿರುವ ಭೂಮಿ ಗುತ್ತಿಗೆ ಪ್ರಕರಣಗಳನ್ನು ಕೂಡಲೇ ಸಕ್ರಮಗೊಳಿಸಬೇಕೆಂದು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

‘ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ ಕೈಗಾರಿಕಾ ವಲಯಕ್ಕೆ ಪೆಟ್ಟುಬೀಳಲಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕೆಗಳು ಬಂಡವಾಳ ಹೂಡಿಕೆ ಮಾಡುವುದಿಲ್ಲ.ಇದರಿಂದ ನೆರೆಯ ರಾಜ್ಯಗಳು ಲಾಭ ಪಡೆಯಲಿವೆ’ ಎಂದುಮಂಡಳಿಯ ಅಧ್ಯಕ್ಷ ಕಿಶೋರ್ ಆಳ್ವ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ. ಜಿಂದಾಲ್‌ಗೆ ಜಮೀನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದ ಅನಗತ್ಯ. ಈ ವಿಚಾರ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದಕರ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.