ADVERTISEMENT

ಬಿಸಿಯು: ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 5:30 IST
Last Updated 15 ಏಪ್ರಿಲ್ 2021, 5:30 IST

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಇದೇ 15ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯ ತಿಳಿಸಿದೆ.

‘ದಿನಾಂಕ 16ರಿಂದ ನಿಗದಿಯಂತೆ ಎಲ್ಲ ಪರೀಕ್ಷೆಗಳು ನಡೆಯುತ್ತಿವೆ. ಮುಂದೂಡಲಾಗಿರುವ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT