ADVERTISEMENT

ಸಾರಿಗೆ ನೌಕರರು ಮುಷ್ಕರ: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 19:31 IST
Last Updated 9 ಏಪ್ರಿಲ್ 2021, 19:31 IST
ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ   

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕಾರಣ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಇದೇ 10 ಮತ್ತು 12ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯ ತಿಳಿಸಿದೆ.

‘ಮುಂದೂಡಲಾಗಿರುವ ಪರೀಕ್ಷೆಗಳ ದಿನಾಂಕವನ್ನು ಶೀಘ್ರ ತಿಳಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT