ADVERTISEMENT

ಬಿಡಿಎ ಕಾರ್ಯಾಚರಣೆ: ಅಕ್ರಮ ಶೆಡ್‌ಗಳ ತೆರವು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 16:06 IST
Last Updated 27 ನವೆಂಬರ್ 2025, 16:06 IST
ಮಾಳಗಾಲದಲ್ಲಿ ಅಕ್ರಮ ಶೆಡ್‌ಗಳನ್ನು ತೆರವು ಮಾಡಲಾಯಿತು. 
ಮಾಳಗಾಲದಲ್ಲಿ ಅಕ್ರಮ ಶೆಡ್‌ಗಳನ್ನು ತೆರವು ಮಾಡಲಾಯಿತು.    

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ಮಾಳಗಾಲದಲ್ಲಿ ₹35 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಮಾಳಗಾಲ ಗ್ರಾಮದ ಸರ್ವೆ ನಂ. 9ರಲ್ಲಿ 22 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಪ್ರದೇಶವನ್ನು ಪ್ರಾಧಿಕಾರ ವಶಪಡಿಸಿಕೊಂಡಿತು.

ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪಶ್ಚಿಮ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನೆರವೇರಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.