
ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಉಲ್ಲಾಳು ಮತ್ತು ಅಗ್ರಹಾರ ದಾಸರಹಳ್ಳಿಗಳಲ್ಲಿ ₹125 ಕೋಟಿ ಮೌಲ್ಯದ ಆಸ್ತಿಯನ್ನು ಮಂಗಳವಾರ ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳು ಗ್ರಾಮದ ಸರ್ವೆ ನಂ. 34ರಲ್ಲಿ 1 ಎಕರೆ ಹಾಗೂ ಸರ್ವೆ ನಂ. 38/1, 2, 4, 5ರಲ್ಲಿ 1 ಎಕರೆ 1 ಗುಂಟೆ ಮತ್ತು ಅಗ್ರಹಾರ ದಾಸರಹಳ್ಳಿ ಗ್ರಾಮದ ಸರ್ವೆ ನಂ. 8ರ 33 ಗುಂಟೆ ಪ್ರದೇಶಗಳಲ್ಲಿ ಅನಧಿಕೃವಾಗಿ ನಿರ್ಮಾಣಗಳನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನೆರವೇರಿತು. ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪಶ್ಚಿಮ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.