ADVERTISEMENT

ಅನಧಿಕೃತ ಕಟ್ಟಡ ತೆರವು: ₹47 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದ ಬಿಡಿಎ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 20:17 IST
Last Updated 6 ಡಿಸೆಂಬರ್ 2025, 20:17 IST
ಬಿಡಿಎ ವತಿಯಿಂದ ಕಾರ್ಯಾಚರಣೆ ನಡೆಸಿ ಅಕ್ರಮ ಕಟ್ಟಡವನ್ನು ತೆರವುಗೊಳಿಸಲಾಯಿತು
ಬಿಡಿಎ ವತಿಯಿಂದ ಕಾರ್ಯಾಚರಣೆ ನಡೆಸಿ ಅಕ್ರಮ ಕಟ್ಟಡವನ್ನು ತೆರವುಗೊಳಿಸಲಾಯಿತು   

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಥಣಿಸಂದ್ರ ಮತ್ತು ಕೆ. ನಾರಾಯಣಪುರದಲ್ಲಿ ಸುಮಾರು ₹47 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಥಣಿಸಂದ್ರ ಗ್ರಾಮದ ಸರ್ವೆ ನಂ. 84/7ರ 2095 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡವನ್ನು ಬಿಡಿಎ ಸಿಬ್ಬಂದಿ ತೆರವುಗೊಳಿಸಿದರು.

ಕೆ. ನಾರಾಯಣಪುರದ ಸರ್ವೆ ನಂ. 29/3ರ 22000 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನ
ದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.