ಬೆಂಗಳೂರು: ನಗರದ ಕರಗ ಮಹೋತ್ಸವದ ಪೂಜಾ ಸ್ಥಳವಾದ ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಹಸಿ ಕರಗ ಮಂಟಪವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಇದಕ್ಕಾಗಿ ಸುಮಾರು ₹4 ಕೋಟಿ ಮಂಜೂರಾತಿಗೆ ಬಿಡಿಎ ಅನುಮೋದನೆ ನೀಡಿದೆ.
ಈ ನಿರ್ಧಾರ ಕೈಗೊಂಡಿದ್ದಕ್ಕೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಶುಕ್ರವಾರ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರು ಸನ್ಮಾನಿಸಿದರು.
ವಿಧಾನಪರಿಷತ್ ಸದಸ್ಯ ಪಿ.ಆರ್. ರಮೇಶ್, ತಿಗಳರ ಸಂಘದ ಸುಬ್ಬಣ್ಣ, ಲಕ್ಷ್ಮಣ್, ಲೋಕೇಶ್, ಕೃಷ್ಣಮೂರ್ತಿ, ಯಾದಗಿರಿ ರಾಮಚಂದ್ರ, ಸುರೇಶ್, ಜಯರಾಜ್ ಇದ್ದರು.
ಏನೇನು ಅಭಿವೃದ್ಧಿ?: ಹಸಿ ಕರಗ ಮಂಟಪ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಬೃಂದಾವನ, ಧ್ಯಾನ ಮಂದಿರ, ಭಕ್ತರು ಕುಳಿತುಕೊಳ್ಳಲು ವ್ಯವಸ್ಥೆ, ದೀಪಾಲಂಕಾರ ವ್ಯವಸ್ಥೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.