ADVERTISEMENT

ಪಿಆರ್‌ಆರ್‌: ಬಿಡಿಎ ವೆಬಿನಾರ್‌ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 20:02 IST
Last Updated 1 ಸೆಪ್ಟೆಂಬರ್ 2020, 20:02 IST

ಬೆಂಗಳೂರು: ಪೆರಿಫೆರಲ್‌ ವರ್ತುಲ ರಸ್ತೆ (ಪಿಆರ್‌ಆರ್‌) ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನು ಪಡೆಯಲು ಇದೇ 3ರಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಿದ್ದ ‘ವರ್ಚ್ಯುವಲ್‌ ಕಾನ್ಫರೆನ್ಸ್‌’ (ವೆಬಿನಾರ್‌) ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮುಂದೂಡಿದೆ.

ಈ ಕುರಿತ ವೆಬಿನಾರ್‌ ಇದೇ 23ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಬಿಡಿಎ ಆಯುಕ್ತ ಎಚ್‌.ಆರ್.ಮಹದೇವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT