ADVERTISEMENT

ಬಿಡಿಎ: ₹60 ಕೋಟಿ ಮೌಲ್ಯದ ಆಸ್ತಿ ವಶ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 16:28 IST
Last Updated 30 ಸೆಪ್ಟೆಂಬರ್ 2021, 16:28 IST
   

ಬೆಂಗಳೂರು: ಎಚ್‌ಬಿಆರ್ ಬಡಾವಣೆಯಲ್ಲಿ ಬಿಡಿಎ ಆಸ್ತಿಯಲ್ಲಿ ನಿರ್ಮಾಣವಾಗಿದ್ದ ತಾತ್ಕಾಲಿಕ ಕಟ್ಟಡ ನೆಲಸಮಗೊಳಿಸಿ ₹60 ಕೋಟಿ ಮೌಲ್ಯದ ಆಸ್ತಿಯನ್ನು ಬಿಡಿಎ ವಶಕ್ಕೆ ಪಡೆದಿದೆ.

ಕಾರ್ಯಪಾಲಕ ಎಂಜಿನಿಯರ್ ಕುಮಾರ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಕಾಚರಕನಹಳ್ಳಿಯಲ್ಲಿ 1 ಎಕರೆ 23 ಗುಂಟೆ ಜಮೀನು ಸ್ವಾಧೀನಕ್ಕೆ ಪಡೆದಿದ್ದಾರೆ.

ಬಿಡಿಎ ಬಡಾವಣೆ ನಿರ್ಮಾಣ ಮಾಡಲು 1978ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಭೂಮಾಲೀಕರು ಬಿಡಿಎ ವಿರುದ್ಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೈಕೋರ್ಟ್ ಬಿಡಿಎ ಪರ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಕೂಡ ತಿರಸ್ಕಾರಗೊಂಡಿತ್ತು. ಆದರೂ, ಅನಧಿಕೃತ ತಾತ್ಕಾಲಿಕ ಕಟ್ಟಡಗಳು ತಲೆ ಎತ್ತಿದ್ದವು ಎಂದು ಬಿಡಿಎ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.