ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಾರ್ಯಾಚರಣೆ ನಡೆಸಿ, ಭೀಮನಕುಪ್ಪೆ ಗ್ರಾಮದಲ್ಲಿ ಒತ್ತುವರಿಯಾಗಿದ್ದ ಸುಮಾರು ₹12 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಭೀಮನಕುಪ್ಪೆ ಗ್ರಾಮದ ಸರ್ವೆ ನಂ. 206/1ರಲ್ಲಿನ 1 ಎಕರೆ 26 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಂದಾಯ ನಿವೇಶನ ಹಾಗೂ ಶೆಡ್‌ಗಳನ್ನು ತೆರವುಗೊಳಿಸಿ, ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಪ್ರಾಧಿಕಾರದ ಕಾರ್ಯನಿರತ ಪಡೆಯ ಡಿವೈಎಸ್‌ಪಿ, ನಾಡಪ್ರಭು ಕೆಂಪೇಗೌಡ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.