
ಬೆಂಗಳೂರು: ಹೇರೋಹಳ್ಳಿಯಲ್ಲಿ ಬಿಡಿಎ ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಶನಿವಾರ ತೆರವು ಮಾಡಲಾಯಿತು.
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಹೇರೋಹಳ್ಳಿ ಗ್ರಾಮದ ಸರ್ವೆ ನಂಬರ್ 64ರಲ್ಲಿನ 32.45 ಗುಂಟೆ ಜಮೀನಿನಲ್ಲಿ ನಿರ್ಮಾಣಗೊಂಡಿದ್ದ ಶೆಡ್‌ಗಳು ಹಾಗೂ ಕಟ್ಟಡಗಳನ್ನು ತೆರವುಗೊಳಿಸಿ ಸುಮಾರು ₹35 ಕೋಟಿ ಮೌಲ್ಯದ ಜಮೀನನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ. ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ಈ ಒತ್ತುವರಿಯನ್ನು ತೆರವು ಮಾಡಲಾಯಿತು ಎಂದು ಬಿಡಿಎ ಎಂಜಿನಿಯರ್ ತಿಳಿಸಿದರು.
ಬಿಡಿಎ ಪಶ್ಚಿಮ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್ ಹಾಗೂ ಆರಕ್ಷಕ ಉಪಾಧೀಕ್ಷಕ ಯು.ಡಿ. ಕೃಷ್ಣಕುಮಾರ್ ಮತ್ತು ಪೊಲೀಸ್ ಇನ್‌ಸ್ಪೆಪೆಕ್ಟರ್ ಟಿ. ಸಂಜೀವರಾಯಪ್ಪ ಅವರ ನೇತೃತ್ವದಲ್ಲಿ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.