ADVERTISEMENT

ಬನಶಂಕರಿಯಲ್ಲಿ ಬಿಡಿಎ ಕಾರ್ಯಾಚರಣೆ: ₹3 ಕೋಟಿ ಆಸ್ತಿ ವಶ

​ಪ್ರಜಾವಾಣಿ ವಾರ್ತೆ
Published 2 ಮೇ 2025, 17:22 IST
Last Updated 2 ಮೇ 2025, 17:22 IST
ಬನಶಂಕರಿಯಲ್ಲಿ ಅನಧಿಕೃತ ಶೆಡ್‌ಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವು ಮಾಡಲಾಯಿತು. 
ಬನಶಂಕರಿಯಲ್ಲಿ ಅನಧಿಕೃತ ಶೆಡ್‌ಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವು ಮಾಡಲಾಯಿತು.    

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಶುಕ್ರವಾರ ಕಾರ್ಯಾಚರಣೆ ನಡೆಸಿ, ಬನಶಂಕರಿ 6ನೇ ಹಂತ 10ನೇ ಬ್ಲಾಕ್ ಬಡಾವಣೆಯಲ್ಲಿ ₹3.10 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಹೆಮ್ಮಿಗೆಪುರ ಗ್ರಾಮದ 2,100 ಚದರ ಅಡಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಮತ್ತು ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಿ, ಜಾಗವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಕಾರ್ಯಾಚರಣೆಯನ್ನು ಪ್ರಾಧಿಕಾರದ ಕಾರ್ಯನಿರತ ಪಡೆಯ ಎಸ್‌ಪಿ, ದಕ್ಷಿಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನಡೆಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.