
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ನಾಗರಬಾವಿ ಬಡಾವಣೆಯಲ್ಲಿ ₹140 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ನಾಗರಬಾವಿ ಗ್ರಾಮದ ಸರ್ವೆ ನಂ. 17ರಲ್ಲಿ 2 ಎಕರೆ 30 ಗುಂಟೆ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ತೆರವುಗೊಳಿಸಿ, ನೂರು ಕೋಟಿಗೂ ಅಧಿಕ ಮೌಲ್ಯದ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು. ವಶಪಡಿಸಿಕೊಂಡ ಜಾಗದಲ್ಲಿ ಸುತ್ತಲೂ ಬೇಲಿ ಹಾಕಲಾಗಿದೆ.
ಅಲ್ಲದೇ ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್. ಪುರ ಹೋಬಳಿಯ ಕುಂದಲಹಳ್ಳಿ (ಎ.ಇ.ಸಿ.ಎಸ್. ಬಡಾವಣೆ) ಗ್ರಾಮದ ಸರ್ವೆ ನಂ. 118ರ 8,070 ಚದರ ಅಡಿಯ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವುಗೊಳಿಸಿ, ಸುಮಾರು ₹25 ಕೋಟಿ ಮೌಲ್ಯದ ನಾಗರಿಕ ಸೌಲಭ್ಯ ನಿವೇಶನ ವಶಪಡಿಸಿಕೊಂಡಿದೆ.
ಕಾರ್ಯಾಚರಣೆಯಲ್ಲಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪಶ್ಚಿಮ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸ್ಥಳೀಯ ಪೊಲೀಸರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.