
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಸಿದ್ದು, ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಜೆ.ಪಿ. ನಗರ 9ನೇ ಹಂತದಲ್ಲಿ ₹20.10 ಕೋಟಿ ಮತ್ತು ಬನಶಂಕರಿ 3ನೇ ಹಂತದಲ್ಲಿ ₹4.25 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಆಲಹಳ್ಳಿ ಗ್ರಾಮದ ಸರ್ವೆ ನಂ. 90/2ರ ವಿವಿಧ ಅಳತೆಯ 10 ನಿವೇಶನಗಳಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ತೆರವುಗೊಳಿಸಲಾಯಿತು.
ಉತ್ತರಹಳ್ಳಿ ಹೋಬಳಿಯ ಕತ್ರಿಗುಪ್ಪೆ ಗ್ರಾಮದ ಸರ್ವೆ ನಂ. 94/1ರಲ್ಲಿ 2108 ಚದರ ಅಡಿಯ ಪ್ರದೇಶದಲ್ಲಿ ಅನಧಿಕೃತ ನಿರ್ಮಾಣಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ವಶಪಡಿಸಿಕೊಂಡಿತು.
ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಮತ್ತು ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.