ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಂಗಳವಾರ ಕಾರ್ಯಾಚರಣೆ ನಡೆಸಿ, ಎಚ್.ಬಿ.ಆರ್. 1ನೇ ಹಂತ, 4ನೇ ಬ್ಲಾಕ್‌ನಲ್ಲಿ ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಿ, ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಕಸಬಾ ಹೋಬಳಿಯ ಹೆಣ್ಣೂರು ಗ್ರಾಮದ ಸರ್ವೆ ನಂ. 56/2ರ 8.5 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಮತ್ತು ಕಾಂಪೌಂಡ್‌ಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ, ಸುಮಾರು ₹10 ಕೋಟಿ ಬೆಲೆ ಬಾಳುವ ಜಾಗವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಅಭಿಯಂತರ ಅಧಿಕಾರಿ-3, ಕಾರ್ಯಪಾಲಕ ಎಂಜಿನಿಯರ್ , ಉತ್ತರ ವಿಭಾಗ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ವೇಳೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.