ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶುಕ್ರವಾರ ಕಾರ್ಯಾಚರಣೆ ನಡೆಸಿ, ಎಚ್.ಎ.ಎಲ್. 2ನೇ ಹಂತದಲ್ಲಿ ₹3.24 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ದೂಕನಹಳ್ಳಿ ಗ್ರಾಮದ ಸರ್ವೆ ನಂ. 51ರಲ್ಲಿನ ನಿವೇಶನ ಸಂಖ್ಯೆ 777/ಯುನಲ್ಲಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, 1080 ಚದರ ಅಡಿ ವಿಸ್ತೀರ್ಣದ ಕೋಟ್ಯಂತರ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಸ್ಥಳೀಯ ಪೊಲೀಸರ ಸಹಾಕರದೊಂದಿಗೆ ನಡೆಸಿದ ಕಾರ್ಯಾಚರಣೆ ವೇಳೆ ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪೂರ್ವ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.