
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಜೆ.ಪಿ. ನಗರ ಬಡಾವಣೆಯ 9ನೇ ಫೇಸ್‌ನಲ್ಲಿ ₹130 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಆಲಹಳ್ಳಿ ಗ್ರಾಮದ ಸರ್ವೆ ನಂ. 20ರಲ್ಲಿ 3 ಎಕರೆ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಗೋದಾಮು, ಕಟ್ಟಡಗಳನ್ನು ಜೆಸಿಬಿ ಯಂತ್ರದ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ವಶಪಡಿಸಿಕೊಂಡು, ಜಾಗದ ಸುತ್ತಲೂ ಬೇಲಿ ಅಳವಡಿಸಿ, ಪ್ರಾಧಿಕಾರದ ಫಲಕ ಅಳವಡಿಸಲಾಗಿದೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಯಿತು. ಬಿಡಿಎ ಕಾರ್ಯ ನಿರತ ಪಡೆಯ ಉಪ ಆರಕ್ಷಕ ಅಧೀಕ್ಷಕ, ವಲಯ ಆಯುಕ್ತ (ದಕ್ಷಿಣ ವಲಯ), ದಕ್ಷಿಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.