ADVERTISEMENT

ಬೆಂಗಳೂರು | ಆರ್.ಟಿ. ನಗರ ಬಡಾವಣೆಯಲ್ಲಿ ₹12.50 ಕೋಟಿ ಮೌಲ್ಯದ ಆಸ್ತಿ ಬಿಡಿಎ ವಶ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 14:18 IST
Last Updated 9 ಸೆಪ್ಟೆಂಬರ್ 2025, 14:18 IST
ಅನಧಿಕೃತ ಶೆಡ್‌ಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಯಿತು. 
ಅನಧಿಕೃತ ಶೆಡ್‌ಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಯಿತು.    

ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ), ಮಂಗಳವಾರ ನಡೆದ ಕಾರ್ಯಾಚರಣೆಯಲ್ಲಿ ಆರ್.ಟಿ. ನಗರ ಬಡಾವಣೆಯಲ್ಲಿ ₹12.50 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಕಸಬಾ ಹೋಬಳಿಯ ಮಠದಹಳ್ಳಿ ಗ್ರಾಮದ ಸರ್ವೆ ನಂಬರ್‌‌ 10/1ರಲ್ಲಿನ ಸುಮಾರು 585 ಚದರ ಮೀಟರ್ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 4 ಶೆಡ್ ಮತ್ತು ಕಾಂಪೌಂಡ್ ಅನ್ನು ಜೆಸಿಬಿ ಮೂಲಕ ತೆರವುಗೊಳಿಸಿ, ₹ 12.50 ಕೋಟಿ ಮೌಲ್ಯದ ಪ್ರದೇಶವನ್ನು ಪ್ರಾಧಿಕಾರ ವಶಪಡಿಸಿಕೊಂಡಿತು.

ಅವಶೇಷಗಳನ್ನು ತೆರವುಗೊಳಿಸಿ, ಈ ಜಾಗದ ಸುತ್ತಲೂ ಬೇಲಿ ಹಾಕಿ, ರಕ್ಷಣೆ ಮಾಡಲಾಗಿದೆ.

ADVERTISEMENT

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ, ಪ್ರಾಧಿಕಾರದ ಕಾರ್ಯಪಡೆಯ ಇನ್‌ಸ್ಪೆಕ್ಟರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಬಾಗಿ , ಎಂಜಿನಿಯರ್‌ ಮಲ್ಲಿಕಾರ್ಜುನ ಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.