ADVERTISEMENT

ನಾಗರಬಾವಿ ಬಡಾವಣೆಯಲ್ಲಿ ₹140 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 19:31 IST
Last Updated 11 ಡಿಸೆಂಬರ್ 2025, 19:31 IST
ಬಿಡಿಎ
ಬಿಡಿಎ   

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ನಾಗರಬಾವಿ ಬಡಾವಣೆಯಲ್ಲಿ ₹140 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಯಶವಂತಪುರ ಹೋಬಳಿಯ ನಾಗರಬಾವಿ ಗ್ರಾಮದ ಸರ್ವೆ ನಂ. 17ರಲ್ಲಿ 2 ಎಕರೆ 30 ಗುಂಟೆ ಪ್ರದೇಶ
ಗಳಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ತೆರವುಗೊಳಿಸಿ, ನೂರು ಕೋಟಿಗೂ ಅಧಿಕ ಮೌಲ್ಯದ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು. ಕೆ.ಆರ್. ಪುರ ಹೋಬಳಿಯ ಕುಂದಲಹಳ್ಳಿ ಗ್ರಾಮದ ಸರ್ವೆ ನಂ. 118ರ 8,070 ಚದರ ಅಡಿಯ ಪ್ರದೇಶದಲ್ಲಿನ ಅಕ್ರಮ ಕಟ್ಟಡ
ಗಳನ್ನು ತೆರವುಗೊಳಿಸಿ, ಸುಮಾರು ₹25 ಕೋಟಿ ಮೌಲ್ಯದ ನಾಗರಿಕ ಸೌಲಭ್ಯ ನಿವೇಶನ ವಶಪಡಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT