ADVERTISEMENT

ಜೆ.ಪಿ. ನಗರ 1ನೇ ಬ್ಲಾಕ್‌ನಲ್ಲಿ ₹16.72 ಕೋಟಿ ಬಿಡಿಎ ಆಸ್ತಿ ವಶ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 16:15 IST
Last Updated 15 ನವೆಂಬರ್ 2025, 16:15 IST
ಜೆ.ಪಿ.ನಗರದಲ್ಲಿ ಅನಧಿಕೃತ ಕಟ್ಟಡಗಳನ್ನು ಬಿಡಿಎ ವತಿಯಿಂದ ತೆರವು ಮಾಡಲಾಯಿತು. 
ಜೆ.ಪಿ.ನಗರದಲ್ಲಿ ಅನಧಿಕೃತ ಕಟ್ಟಡಗಳನ್ನು ಬಿಡಿಎ ವತಿಯಿಂದ ತೆರವು ಮಾಡಲಾಯಿತು.    

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, ಜೆ.ಪಿ. ನಗರ 1ನೇ ಬ್ಲಾಕ್‌ನಲ್ಲಿ ₹16.72 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ. 3/2ಬಿ ಮತ್ತು 4ರ 18,000 ಚದರ ಅಡಿ ವಿಸ್ತೀರ್ಣದ ವಿವಿಧ ಅಳತೆಯ 20 ನಿವೇಶನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ದಕ್ಷಿಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ಗಳು, ನಾಡಪ್ರಭು ಕೆಂಪೇಗೌಡ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.