ಬೆಂಗಳೂರು: ಬ್ಯಾರೀಸ್ ಸೆಂಟ್ರಲ್ ಕಮಿಟಿಯ ಎರಡನೇ ವರ್ಷದ ‘ಬ್ಯಾರಿ ಕೂಟ’ ಫೆ.1ಕ್ಕೆ ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂಬರ್ 8ರಲ್ಲಿರುವ ಶೃಂಗಾರ್ ಪ್ಯಾಲೇಸ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಶಬೀರ್ ಬ್ರಿಗೇಡ್ ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾರಿ ಕೂಟ-2026’ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿ ವೇತನ ವಿತರಣೆ, ಆಂಬ್ಯುಲೆನ್ಸ್ ಲೋಕಾರ್ಪಣೆ ನಡೆಯಲಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಬ್ಯಾರಿ ಸಮುದಾಯದ ಮಕ್ಕಳು, ಮಹಿಳೆಯರು, ಯುವಕರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ . ಕಮಿಟಿಯ ನೂತನ ವೆಬ್ ಸೈಟ್ ಅನ್ನು ಕೂಡ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮದ ಭಾಗವಾಗಿ ಕವಿಗೋಷ್ಠಿ, ಬೆಂಗಳೂರಿನಲ್ಲಿ ನೆಲೆಸಿರುವ ಬ್ಯಾರಿ ಸಮುದಾಯದವರಿಗೆ ವಿವಿಧ ಸ್ಪರ್ಧೆಗಳನ್ನುಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು ಹೆಚ್,ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ರಿಜ್ವಾನ್ ಅರ್ಷದ್ ಬ್ಯಾರಿ ಸಮುದಾಯದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ಉಪಾಧ್ಯಕ್ಷ ಗಫೂರ್, ಮುಖಂಡರಾದ ಸವಾದ್ ಆರ್.ಟಿ ನಗರ, ಸಂಶುದ್ದೀನ್ ಕುಕ್ಕಾಜೆ, ರಿಫಾಯಿ, ಮಾಧ್ಯಮ ಕಾರ್ಯದರ್ಶಿ ಬಶೀರ್ ಅಡ್ಯನಡ್ಕ, ಹಾರಿಸ್ ಬೆಳ್ಮ, ಆಸಿಫ್ ಡಿಫೈನ್, ಸಾಲಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.