ADVERTISEMENT

ಬೆಂಗಳೂರು | ಭಿಕ್ಷಾಟನೆ: 45 ಮಕ್ಕಳ ರಕ್ಷಣೆ, 40 ಮಂದಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 16:22 IST
Last Updated 11 ಏಪ್ರಿಲ್ 2024, 16:22 IST
<div class="paragraphs"><p>ಸಿಸಿಬಿ ಸಂಗ್ರಹ ಚಿತ್ರ </p></div>

ಸಿಸಿಬಿ ಸಂಗ್ರಹ ಚಿತ್ರ

   

ಬೆಂಗಳೂರು: ನಗರದಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 45 ಮಕ್ಕಳನ್ನು ರಕ್ಷಿಸಿದ್ದಾರೆ. ಮಕ್ಕಳನ್ನು ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿದ್ದ ಆರೋಪದಡಿ 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

‘ನಗರದ ಪ್ರಮುಖ ವೃತ್ತಗಳು, ರಸ್ತೆಗಳು ಹಾಗೂ ರಂಜಾನ್ ನಿಮಿತ್ತ ಕೆಲ ಮಸೀದಿಗಳ ಮುಂಭಾಗದಲ್ಲಿ ಹಲವರು ಭಿಕ್ಷಾಟನೆ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

ADVERTISEMENT

‘ಮಕ್ಕಳನ್ನು ಬಳಸಿಕೊಂಡು ಹಲವರು ಭಿಕ್ಷೆ ಬೇಡುತ್ತಿದ್ದರು. ಅವರನ್ನು ವಿಚಾರಣೆ ನಡೆಸಿದಾಗ, ಸಮರ್ಪಕ ಉತ್ತರ ನೀಡಲಿಲ್ಲ. ಭಿಕ್ಷಾಟನೆಯಲ್ಲಿ ತೊಡಗಿಸಿದ್ದ ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳ ಸುಪರ್ದಿಗೆ ಒಪ್ಪಿಸಲಾಗಿದೆ’ ಎಂದರು.

‘ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ರಾಜಸ್ಥಾನ, ಉತ್ತರ ಪ್ರದೇಶದವರಾದ 40 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರು ಮಕ್ಕಳ ಪೋಷಕರಾ ? ಅಥವಾ ಬೇರೆ ಏನಾದರೂ ಸಂಬಂಧವಿದೆಯಾ? ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮಕ್ಕಳ ಮಾರಾಟದ ಬಗ್ಗೆಯೂ ಶಂಕೆ ಇದ್ದು, ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.