ಬೆಂಗಳೂರು: ಬಿಬಿಎಂಪಿಯು ಥಣಿಸಂದ್ರ ಮುಖ್ಯರಸ್ತೆಯ ರೈಲ್ವೆ ಕೆಳಸೇತುವೆಯಿಂದ ಬೇಗೂರು ಜಂಕ್ಷನ್‌ವರೆಗೆ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಈ ಸಲುವಾಗಿ ಈ ಪ್ರದೇಶದ ಸಂಚಾರ ಮಾರ್ಗದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ.
ಕಾಮಗಾರಿ ನಿರ್ವಹಣೆ ವೇಳೆ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು ಎಂಬ ಕಾರಣಕ್ಕೆ ಈ ರಸ್ತೆಯ ಒಂದು ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಈ ಪರ್ಯಾಯ ವ್ಯವಸ್ಥೆ ಇದೇ 27ರಿಂದ 2021ರ ಜ.10ರವರೆಗೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.