ADVERTISEMENT

ಅಡಿಗಡಿಗೂ ಲಂಚ ಪ್ರಕರಣ: ಬೆಳ್ಳಂದೂರು ಇನ್‌ಸ್ಪೆಕ್ಟರ್ ಅಮಾನತು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 15:59 IST
Last Updated 4 ನವೆಂಬರ್ 2025, 15:59 IST
<div class="paragraphs"><p>ಅಮಾನತು</p></div>

ಅಮಾನತು

   

ಬೆಂಗಳೂರು: ಮೃತಪಟ್ಟ ಯುವತಿಯ ಸಾವಿನ ಕುರಿತು ಪ್ರಕರಣ ದಾಖಲಿಸಲು ಹಾಗೂ ಮರಣೋತ್ತರ ಪರೀಕ್ಷೆ ಮಾಡಿಸಲು ಲಂಚ ಪಡೆದಿದ್ದ ಆರೋಪದಡಿ ಬೆಳ್ಳಂದೂರು ಠಾಣೆ ಇನ್‌ಸ್ಪೆಕ್ಟರ್‌ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಪಿಎಸ್‌ಐ ಸಂತೋಷ್ ಮತ್ತು ಕಾನ್‌ಸ್ಟೆಬಲ್‌ ಗೋರಕ್‌ನಾಥ್‌ ಅವರನ್ನು ಈ ಹಿಂದೆ ಅಮಾನತು ಮಾಡಲಾಗಿತ್ತು.

ADVERTISEMENT

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಸಿಎಫ್‌ಒ ಶಿವಕುಮಾರ್ ಅವರ ಪುತ್ರಿ ಅಕ್ಷಯಾ(34) ಸೆ.18ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ವಿಚಾರ ತಿಳಿದು ತಂದೆ–ತಾಯಿ ಮುಂಬೈನಿಂದ ನಗರಕ್ಕೆ ಬಂದಿದ್ದರು. ಮೃತಪಟ್ಟ ಪುತ್ರಿಯ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ನಡೆಸಲು ಪಟ್ಟ ಸಂಕಷ್ಟ ಹಾಗೂ ಆಂಬುಲೆನ್ಸ್‌ ಚಾಲಕ, ಪೊಲೀಸರು, ಸ್ಮಶಾನದ ಸಿಬ್ಬಂದಿ ಹಾಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಂದ ಅನುಭವಿಸಿದ ನೋವು ಹಾಗೂ ಸಿಬ್ಬಂದಿ ಹಣಕ್ಕೆ ಬೇಡಿಕೆಯಿಟ್ಟ ಬಗೆಯನ್ನು ಕೆ.ಶಿವಕುಮಾರ್ ಅವರು ‘ಲಿಂಕ್ಡ್​​ಇನ್‌’ನಲ್ಲಿ ಎಳೆಎಳೆಯಾಗಿ ತೆರೆದಿಟ್ಟಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.