ADVERTISEMENT

ಬೆಳ್ಳಂದೂರು: ಕೋವಿಡ್‌ ಸೊಂಕಿತರ ಸಂಖ್ಯೆ 27ಕ್ಕೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 21:43 IST
Last Updated 25 ಫೆಬ್ರುವರಿ 2021, 21:43 IST
   

ಬೆಂಗಳೂರು: ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ಎಸ್‌ಜೆಆರ್‌ ವಾಟರ್‌ಮಾರ್ಕ್‌ ಅಪಾರ್ಟ್‌ಮೆಂಟ್‌ ಸಮುಚ್ಚಯದ ನಿವಾಸಿಗಳಲ್ಲಿ ಮತ್ತೊಬ್ಬ ವ್ಯಕ್ತಿ ಕೋವಿಡ್‌ ಹೊಂದಿರುವುದು ಗುರುವಾರ ದೃಢಪಟ್ಟಿದೆ. ಇದರೊಂದಿಗೆ ಈ ಅಪಾರ್ಟ್‌ಮೆಂಟ್‌ ಸಮುಚ್ಚಯದ ನಿವಾಸಿಗಳಲ್ಲಿ ಕೋವಿಡ್‌ ಹೊಂದಿರುವವರ ಸಂಖ್ಯೆ 27ಕ್ಕೆ ಏರಿಕೆ ಕಂಡಿದೆ.

ಈ ಅಪಾರ್ಟ್‌ಮೆಂಟ್‌ ಸಮುಚ್ಚಯದ ನಿವಾಸಿಗಳಲ್ಲಿ ಬುಧವಾರದವರೆಗೆ ಕೋವಿಡ್‌ ಪರೀಕ್ಷೆಗೊಳಗಾಗಿದ್ದ 1055 ಮಂದಿಯಲ್ಲಿ 26 ಮಂದಿ ಸೋಂಕು ಹೊಂದಿದ್ದರು. ಬುಧವಾರ 85 ಮಂದಿಯ ಮೂಗಿನ ದ್ರವದ ಮಾದರಿ ಸಂಗ್ರಹಿಸಲಾಗಿತ್ತು.

ಅಪಾರ್ಟ್‌ಮೆಂಟ್‌ ಸಮುಚ್ಚಯವನ್ನು ಕಂಟೈನ್‌ಮೆಂಟ್ ಪ್ರದೇಶ ಎಂದು ಬಿಬಿಎಂಪಿ ಗುರುತಿಸಿದೆ. ಸೋಂಕು ಹರಡದಂತೆ ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.